ಬದುಕಿನಂತೆ ಸಾಹಿತ್ಯವೂ ವಿಸ್ತಾರವಾಗಿದೆ: ನಾ. ಮೊಗಸಾಲೆ

September 18, 2019
7:00 PM

ಪುತ್ತೂರು: ಸಾಹಿತ್ಯದಿಂದ ಅಸಹನೆ ದೂರವಾಗುತ್ತದೆ. ಸಾಹಿತಿಗಳು ಅಸಹನೆ ದೂರಮಾಡುವಲ್ಲಿ ಸಾಹಿತ್ಯದ ಕೊಡುಗೆ ನೀಡುತ್ತಿದ್ದಾರೆ. ವಿನಯ, ಔದಾರ್ಯವನ್ನು ಜನರ ಮನದಲ್ಲಿ ತುಂಬುವ ಕಾರ್ಯವನ್ನು ಸಾಹಿತ್ಯವು ಮಾಡುತ್ತದೆ. ಸಾಹಿತ್ಯ ಬರಡಾಗಿದೆ ಎಂಬುದು ಅಸತ್ಯ. ಇಂದು ಯುವಪೀಳಿಗೆಯು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳುವ ಕಾಳಜಿಯನ್ನು ಹೊಂದಿದ್ದಾರೆ. ಬದುಕಿನಂತೆ ಸಾಹಿತ್ಯವೂ ವಿಸ್ತಾರವಾದುದು ಎಂದು ಸಾಹಿತಿ ನಾ. ಮೊಗಸಾಲೆ ಅಭಿಪ್ರಾಯಪಟ್ಟರು.

Advertisement
Advertisement
Advertisement

ಅವರು ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಸಂಘ, ಐಕ್ಯುಎಸಿ ಘಟಕ ಮತ್ತು ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಸಹಯೋಗದೊಂದಿಗೆ ನಡೆದ ‘ಮೊಗಸಾಲೆ ಸಾಹಿತ್ಯ ವಿಹಾರ ಸರಣಿ’ ಕಾರ್ಯಕ್ರಮ ಮತ್ತು ಸಾಹಿತ್ಯಗೋಷ್ಠಿಯಲ್ಲಿ ಅತಿಥಿಯಾಗಿ  ಮಾತನಾಡಿದರು.ಸಾಹಿತ್ಯ ಬಗೆಗಿನ ಪ್ರೀತಿ ಹಾಗೂ ಅಧ್ಯಯನವು ಸಾಹಿತ್ಯದ ಬೆಳವಣಿಗೆಗೆ ಸಹಾಯಕವಾಗುತ್ತದೆ. ಸಾಹಿತ್ಯದ ಕುರಿತಾದ ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಾಹಿತ್ಯವು ಜನರ ಮನದಲ್ಲಿ ಸಂವೇದನೆಯನ್ನು ಚಿಗುರಿಸುತ್ತದೆ. ಸಾಹಿತ್ಯದಲ್ಲಿ ಸ್ವಂತಿಕೆ ಹಾಗೂ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

Advertisement

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ನಾ. ಮೊಗಸಾಲೆಯವರು ಕಾಂತಾವರ ಎಂಬ ಚಿಕ್ಕ ಹಳ್ಳಿಯಲ್ಲಿ ಸಾಹಿತ್ಯ ಕೃಷಿಯನ್ನು ಆರಂಭಿಸಿದವರು. ವೈದ್ಯನಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಸಾಧಕರನ್ನು ಪರಿಚಯಿಸುವಲ್ಲಿ ನಾ. ಮೊಗಸಾಲೆಯವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಕಾಂತಾವರ ಎಂಬ ಪುಟ್ಟ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ಆಯೋಜಿಸಿ ಕಾಂತಾವರವನ್ನು ಮುಖ್ಯಭೂಮಿಕೆಗೆ ತಂದಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಕಾಸರಗೋಡಿನ ಸ್ನಾತಕೋತ್ತರ ಕೇಂದ್ರದ ರವಿಶಂಕರ್ ಜಿ.ಕೆ., ಮೊಗಸಾಲೆಯವರ ಕಾದಂಬರಿಗಳನ್ನು ವಿಮರ್ಶಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ನೇರಳಕಟ್ಟೆ ನಾ. ಮೊಗಸಾಲೆ ಅವರ ಸಣ್ಣಕಥೆಗಳ ಬಗ್ಗೆ ವಿಮರ್ಶಿಸಿದರು.

Advertisement

ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಾದ ದಿವ್ಯಶ್ರೀ, ಸ್ವಾತಿ ಪ್ರಾರ್ಥಿಸಿದರು. ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಬಿ. ಜನಾರ್ದನ ಭಟ್ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಸದಾನಂದ ನಾರಾವಿ ವಂದಿಸಿದರು. ವಿದ್ಯಾರ್ಥಿ ರಾಮಕಿಶನ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror