ಪುತ್ತೂರು: ಸಾಹಿತ್ಯದಿಂದ ಅಸಹನೆ ದೂರವಾಗುತ್ತದೆ. ಸಾಹಿತಿಗಳು ಅಸಹನೆ ದೂರಮಾಡುವಲ್ಲಿ ಸಾಹಿತ್ಯದ ಕೊಡುಗೆ ನೀಡುತ್ತಿದ್ದಾರೆ. ವಿನಯ, ಔದಾರ್ಯವನ್ನು ಜನರ ಮನದಲ್ಲಿ ತುಂಬುವ ಕಾರ್ಯವನ್ನು ಸಾಹಿತ್ಯವು ಮಾಡುತ್ತದೆ. ಸಾಹಿತ್ಯ ಬರಡಾಗಿದೆ ಎಂಬುದು ಅಸತ್ಯ. ಇಂದು ಯುವಪೀಳಿಗೆಯು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳುವ ಕಾಳಜಿಯನ್ನು ಹೊಂದಿದ್ದಾರೆ. ಬದುಕಿನಂತೆ ಸಾಹಿತ್ಯವೂ ವಿಸ್ತಾರವಾದುದು ಎಂದು ಸಾಹಿತಿ ನಾ. ಮೊಗಸಾಲೆ ಅಭಿಪ್ರಾಯಪಟ್ಟರು.
ಅವರು ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಸಂಘ, ಐಕ್ಯುಎಸಿ ಘಟಕ ಮತ್ತು ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಸಹಯೋಗದೊಂದಿಗೆ ನಡೆದ ‘ಮೊಗಸಾಲೆ ಸಾಹಿತ್ಯ ವಿಹಾರ ಸರಣಿ’ ಕಾರ್ಯಕ್ರಮ ಮತ್ತು ಸಾಹಿತ್ಯಗೋಷ್ಠಿಯಲ್ಲಿ ಅತಿಥಿಯಾಗಿ ಮಾತನಾಡಿದರು.ಸಾಹಿತ್ಯ ಬಗೆಗಿನ ಪ್ರೀತಿ ಹಾಗೂ ಅಧ್ಯಯನವು ಸಾಹಿತ್ಯದ ಬೆಳವಣಿಗೆಗೆ ಸಹಾಯಕವಾಗುತ್ತದೆ. ಸಾಹಿತ್ಯದ ಕುರಿತಾದ ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಸಾಹಿತ್ಯವು ಜನರ ಮನದಲ್ಲಿ ಸಂವೇದನೆಯನ್ನು ಚಿಗುರಿಸುತ್ತದೆ. ಸಾಹಿತ್ಯದಲ್ಲಿ ಸ್ವಂತಿಕೆ ಹಾಗೂ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ. ಜಯರಾಮ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ನಾ. ಮೊಗಸಾಲೆಯವರು ಕಾಂತಾವರ ಎಂಬ ಚಿಕ್ಕ ಹಳ್ಳಿಯಲ್ಲಿ ಸಾಹಿತ್ಯ ಕೃಷಿಯನ್ನು ಆರಂಭಿಸಿದವರು. ವೈದ್ಯನಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಸಾಧಕರನ್ನು ಪರಿಚಯಿಸುವಲ್ಲಿ ನಾ. ಮೊಗಸಾಲೆಯವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಕಾಂತಾವರ ಎಂಬ ಪುಟ್ಟ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ಆಯೋಜಿಸಿ ಕಾಂತಾವರವನ್ನು ಮುಖ್ಯಭೂಮಿಕೆಗೆ ತಂದಿದ್ದಾರೆ ಎಂದು ಹೇಳಿದರು.
ಈ ಸಂದರ್ಭ ಕಾಸರಗೋಡಿನ ಸ್ನಾತಕೋತ್ತರ ಕೇಂದ್ರದ ರವಿಶಂಕರ್ ಜಿ.ಕೆ., ಮೊಗಸಾಲೆಯವರ ಕಾದಂಬರಿಗಳನ್ನು ವಿಮರ್ಶಿಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ನೇರಳಕಟ್ಟೆ ನಾ. ಮೊಗಸಾಲೆ ಅವರ ಸಣ್ಣಕಥೆಗಳ ಬಗ್ಗೆ ವಿಮರ್ಶಿಸಿದರು.
ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಹೆಚ್.ಜಿ. ಶ್ರೀಧರ್ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಾದ ದಿವ್ಯಶ್ರೀ, ಸ್ವಾತಿ ಪ್ರಾರ್ಥಿಸಿದರು. ಕಾಂತಾವರ ಮೊಗಸಾಲೆ 75 ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಬಿ. ಜನಾರ್ದನ ಭಟ್ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಸದಾನಂದ ನಾರಾವಿ ವಂದಿಸಿದರು. ವಿದ್ಯಾರ್ಥಿ ರಾಮಕಿಶನ್ ಕಾರ್ಯಕ್ರಮ ನಿರೂಪಿಸಿದರು.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…