ಸುಳ್ಯ:ರೆಡ್‍ಕ್ರಾಸ್ ಸಂಸ್ಥೆ ಮಾನವೀಯತೆಯ ನೆಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದ್ದು, ಅದು ಮನುಷ್ಯತ್ವವನ್ನು ಗೌರವಿಸುವ ಸಂಸ್ಥೆಯಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ತಮ್ಮ ಬದುಕಿನಲ್ಲೂ ಯಾವತ್ತೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ ಎಂದು ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪಸ್ಯಾಸಕಿ, ವಲಯ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವರೆಡ್‍ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಕುರಿತು ಮಾಹಿತಿ ನೀಡುತ್ತಾ ಮಾತನಾಡುತ್ತಿದ್ದರು. ರೆಡ್‍ಕ್ರಾಸ್ ಸಂಸ್ಥೆ ಜನರನ್ನುಸಮಾಜಮುಖಿ ವ್ಯಕ್ತಿಯನ್ನಾಗಿ ಬೆಳೆಸುತ್ತದೆ. ಸಂಸ್ಥೆಯಲ್ಲಿ ಕಲಿತುದ್ದನ್ನು ಕೇವಲ ಸಂಸ್ಥೆಗೆ ಸೀಮಿತವಾಗಿಡದೇ ಜೀವನಕ್ಕೆ ಅಳವಡಿಸಿಕೊಳ್ಳಿ, ಮನುಷ್ಯರನ್ನು ಮನುಷ್ಯರನ್ನಾಗಿಕಾಣುತ್ತಾ ನಿಮ್ಮ ಭವಿಷ್ಯವನ್ನು ನೀವೇ ರೂಪಿಸುವ ಕಡೆಗೆ ಗಮನಹರಿಸಿ ಎಂದರು.
ರೆಡ್‍ಕ್ರಾಸ್‍ಘಟಕ ನಾಯಕರಾದ ಭುವನ್ ಪಿ, ಕುಮುದಾ ಬಿ ಎಸ್, ಮಹೇಶ್ವರಿ ಪಿ, ಬ್ರಿಜೇಶ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಯಾನ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…