ಮಡಿಕೇರಿ : ಮೂರ್ನಾಡು ಸಮೀಪದ ಕಾವೇರಿ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ದ ಬಲಮುರಿ ಗ್ರಾಮದ ಅಗಸ್ತ್ಯೇಶ್ವರ ಹಾಗೂ ಕಾವೇರಿ ಕಣ್ವಮುನೀಶ್ವರ ದೇವಾಲಯದಲ್ಲಿ ತುಲಾ ಸಂಕ್ರಮಣದ ವಿಶೇಷ ಪೂಜಾ ಕಾರ್ಯಗಳು ಭಕ್ತಾಧಿಗಳ ಸಮ್ಮುಖದಲ್ಲಿ ಜರುಗಿತು.
ತಲಕಾವೇರಿಯಲ್ಲಿ ಕಾವೇರಿ ತೀರ್ಥೊದ್ಭವದ ದಿನದಂದೆ ಬಲಮುರಿಯಲ್ಲೂ ತುಲಾ ಸಂಕ್ರಮಣದ ಜಾತ್ರೆ ಈ ವರ್ಷ ನಡೆದಿದೆ. ಅಗಸ್ತ್ಯೇಶ್ವರ ದೇವಾಲಯದ ಅರ್ಚಕ ಚಂದ್ರಶೇಖರ್ ಐತಾಳ್ ಅವರ ನೇತೃತ್ವದಲ್ಲಿ ಬೆಳಗ್ಗೆ 5 ಗಂಟೆಯಿಂದ ಧಾರ್ಮಿಕ ಕೈಂಕರ್ಯಗಳು ಆರಂಭಗೊಂಡು, ದೇವರಿಗೆ ಕರ್ಪೂರದಾರತಿ, ರುದ್ರಾಭಿಷೇಕ, ಕುಂಕುಮಾರ್ಚನೆ, ಮಹಾಪೂಜೆ ಜರುಗಿತು. ಬೆಳಿಗ್ಗಿನಿಂದಲೆ ದೇವಾಲಯಕ್ಕೆ ಆಗಮಿಸಿದ ಭಕ್ತಾಧಿಗಳು ತೀರ್ಥ ಪ್ರಸಾದ ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾದರು.
ಕಾವೇರಿ ನದಿಯ ಎಡಭಾಗದಲ್ಲಿರುವ ಕಾವೇರಿ ಕಣ್ವ ಮುನೀಶ್ವರ ದೇವಾಲಯದಲ್ಲಿಯು ಪೂಜಾ ಕಾರ್ಯಕ್ರಮಗಳು ಬೆಳಿಗ್ಗಿನಿಂದಲೆ ಪ್ರಾರಂಭಗೊಂಡು ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ಮೊದಲು ಕಾವೇರಿ ಕಣ್ವ ಮುನೀಶ್ವರ ದೇವಾಲಯಕ್ಕೆ ಹೋಗಿ ಹಣ್ಣುಕಾಯಿ ಪೂಜೆ ಸಲ್ಲಿಸಿ ಅಲ್ಲಿಂದ ಅಗಸ್ತ್ಯೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬಲಮುರಿಯ ಗ್ರಾಮದ ಭಕ್ತಾದಿಗಳಲ್ಲದೆ, ಮೂರ್ನಾಡು, ಪಾರಾಣೆ, ಬೇತ್ರಿ, ಹೊದ್ದೂರು, ನಾಪೋಕ್ಲು, ಕೊಂಡಂಗೇರಿ ಸುತ್ತಮುತ್ತಲ ಗ್ರಾಮಗಳಿಂದ ಭಕ್ತರು ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ತುಲಾ ಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳಿದರು. ಕಾವೇರಿ ನದಿಯ ತೀರದಲ್ಲಿ ಕೇಶ ಮುಂಡನ, ಪೂರ್ವಿಕರಿಗೆ ಪಿಂಡಾರ್ಪಣೆ ಕಾರ್ಯಗಳು ನಡೆದವು.
ಪ್ರತಿವರ್ಷಕ್ಕಿಂತ ಈ ಬಾರಿ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರ ಸಂಖ್ಯೆ ಅಧಿಕವಿತ್ತು. ಭಕ್ತಾಧಿಗಳಿಗೆ ಬಲಮುರಿ ಗ್ರಾಮದ ಪೇರಿಯಂಡ ಪೆಮ್ಮಯ್ಯ ಅವರ ಸಹಕಾರದಿಂದ ಅನ್ನಸಂತರ್ಪಣೆ ನಡೆಯಿತು.
ಅಗಸ್ತ್ಯೇಶ್ವರ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಕೊಂಗೀರಂಡ ಸಾಧು ತಮ್ಮಯ್ಯ, ಕಾರ್ಯದರ್ಶಿ ಪೊನ್ನಚ್ಚನ ಜಯ ಮತ್ತು ಸದಸ್ಯರು ಹಾಗೂ ಕಾವೇರಿ ಕಣ್ವ ಮುನೀಶ್ವರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಎಂ.ಅಪ್ಪಚ್ಚು, ಕಾರ್ಯದರ್ಶಿ ಚೇಯ್ಯಂಡ ಗಣಪತಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…