ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ ಚಿರತೆಯೊಂದು ಕೃಷಿಕನಿಗೆ ದಾಳಿ ಮಾಡಿದ ಬಳಿಕ “ಆಪರೇಶನ್ ಚೀತಾ” ನಡೆಯಿತು. ಗುರುವಾರ ಮಧ್ಯಾಹ್ನದ ಹೊತ್ತಿಗೆ ಆಲ್ಕಬೆ ಬೈಲಿನ ಕಾಯಾರ ಬಾಲಕೃಷ್ಣ ಎಂಬವರಿಗೆ ತೋಟದಲ್ಲಿ ಹುಲ್ಲಿಗೆ ಹೋದಾಗ ದಾಳಿ ನಡೆಸಿತ್ತು. ತಕ್ಷಣವೇ ಗಾಯಾಳು ಕೃಷಿಕರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಡೆಸಿದರು.
ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯೊಬ್ಬರ ಮೇಲೂ ಚಿರತೆ ದಾಳಿ ನಡೆಸಿದೆ. ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು “ಆಪರೇಶನ್ ಚೀತಾ” ಸದ್ಯಕ್ಕೆ ನಿಲ್ಲಿಸಿ ಬೋನು ಇರಿಸಿ ಇಲಾಖಾ ಅಧಿಕಾರಿಗಳು ಹಿಂತಿರುಗಿದ್ದು ನಾಳೆ ಮತ್ತೆ ಕಾರ್ಯಾಚರಣೆ ನಡೆಯಲಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.