Advertisement
ಸುದ್ದಿಗಳು

ಬಳ್ಪದಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ-ಅಪಪ್ರಚಾರ ರಾಜಕೀಯ ಪ್ರೇರಿತ – ವೆಂಕಟ್ ವಳಲಂಬೆ

Share

ಸುಳ್ಯ: ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

35 minutes ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

58 minutes ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

2 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

14 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

23 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

23 hours ago