ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಗುರುವಾರ ಬೆಳಗ್ಗೆ ಗೊನೆ ಮುಹೂರ್ತ ನೆರವೇರಿತು. ಇದೇ ಸಂದರ್ಭ ಕೊಡಿಮರ ಮುಹೂರ್ತ ನೆರವೇರಿತು.ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ ಮೊದಲಾದವರು ಇದ್ದರು.
ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ , ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel