ಬರ್ಮಿಂಗ್‌ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ. ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 314 ರನ್ ಗಳಿಸಿತು.
ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…