Advertisement
ರಾಷ್ಟ್ರೀಯ

ಬಾಂಗ್ಲಾಕ್ಕೆ 315 ರನ್ ಸವಾಲು ನೀಡಿದ ಭಾರತ

Share

ಬರ್ಮಿಂಗ್‌ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ‌. ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 314 ರನ್ ಗಳಿಸಿತು.

ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.

ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

19 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago