ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಯುತಿದೆ. ಇದರ ಅಂಗವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ 2020 ಮಾರ್ಚ್ 31ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸುತ್ತಿವೆ.
ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದೆ. ಇಲ್ಲಿನ ಹಳೆಯ ಸೇತುವೆಯನ್ನು ಕೆಡವಿ 10 ಮೀಟರ್ ಅಗಲದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…