ಸಂಪಾಜೆ: ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.
ಕೊಡಗು-ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಮಡಿಕೇರಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ, ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರವನ್ನು ಲಯನ್ ಕಿಶೋರ್ ಕಲ್ಲುಗುಂಡಿ ಉದ್ಘಾಟಿಸಿದರು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಸಭಾಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಡಾ.ಕೃಪಾಲಿನಿ, ಡಾ.ಕಿರಣ್ ಭಟ್ ಡಾ.ವಿಕ್ರಂ ಭಟ್, ಡಾ. ಫರೀನ್, ಲಯನ್ಸ್ ಕ್ಲಬ್ ಸಂಪಾಜೆಯ ಕಿಶೋರ್ ಕಲ್ಲುಗುಂಡಿ, ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಉರುಬೈಲು, ಉದ್ಭವ ಟ್ರಸ್ಟ್ ನ ಮೇಲ್ವಿಚಾರಕ ಮಲ್ಲಿಕಾರ್ಜುನಪ್ಪ, ಆರೋಗ್ಯ ಅಧಿಕಾರಿ ಲೋಕನಾಥ್, ಆರೋಗ್ಯ ಪರಿವೀಕ್ಷಕ ಅನಂತ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಎನ್.ಎಸ್ ದೇವಿಪ್ರಸಾದ್, ಇಂದಿರಾ ದೇವಿಪ್ರಸಾದ್, ಹಿರಿಯ ವೈದ್ಯಾಧಿಕಾರಿಗಳಾದ ಜಿ.ಕೆ.ಸುಬ್ರಮಣ್ಯ ಭಟ್, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೈ.ಕೆ.ಮಾಲತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ವಿನೀತ್, ಲಯನ್ ಸಚಿತ್ ರೈ, ಸಂಧ್ಯಾ ಸಚಿತ್ ರೈ, ಲಯನ್ ನವೀನ್ ಕುಮಾರ್ ಹಾಗೂ ಸಂಪಾಜೆ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಮತ್ತು ಸಂಪಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಲಯನ್ ಕಿಶೋರ್ ಸ್ವಾಗತಿಸಿ ಲೋಕನಾಥ್ ವಂದಸಿ, ಮಲ್ಲಿಕಾರ್ಜುನಪ್ಪ ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ ಯಶೋಧ ಕಾರ್ಯಕ್ರಮವನ್ನು ನಿರೂಪಿಸಿದರು.