ಬಾಲಚಂದ್ರ ಕಳಗಿಯವರ ಸ್ಮರಣಾರ್ಥ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

October 25, 2019
7:01 AM

ಸಂಪಾಜೆ: ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ  ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

ಕೊಡಗು-ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಮಡಿಕೇರಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ,  ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರವನ್ನು  ಲಯನ್ ಕಿಶೋರ್ ಕಲ್ಲುಗುಂಡಿ  ಉದ್ಘಾಟಿಸಿದರು.  ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಕುಮಾರ್ ಚೆದ್ಕಾರ್ ಸಭಾಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಡಾ.ಕೃಪಾಲಿನಿ, ಡಾ.ಕಿರಣ್ ಭಟ್ ಡಾ.ವಿಕ್ರಂ ಭಟ್,  ಡಾ. ಫರೀನ್, ಲಯನ್ಸ್ ಕ್ಲಬ್ ಸಂಪಾಜೆಯ ಕಿಶೋರ್ ಕಲ್ಲುಗುಂಡಿ, ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಉರುಬೈಲು, ಉದ್ಭವ ಟ್ರಸ್ಟ್ ನ ಮೇಲ್ವಿಚಾರಕ ಮಲ್ಲಿಕಾರ್ಜುನಪ್ಪ, ಆರೋಗ್ಯ ಅಧಿಕಾರಿ ಲೋಕನಾಥ್, ಆರೋಗ್ಯ ಪರಿವೀಕ್ಷಕ  ಅನಂತ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ  ರಮಾದೇವಿ ಬಾಲಚಂದ್ರ ಕಳಗಿ, ಎನ್.ಎಸ್ ದೇವಿಪ್ರಸಾದ್, ಇಂದಿರಾ ದೇವಿಪ್ರಸಾದ್, ಹಿರಿಯ ವೈದ್ಯಾಧಿಕಾರಿಗಳಾದ ಜಿ.ಕೆ.ಸುಬ್ರಮಣ್ಯ ಭಟ್, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೈ.ಕೆ.ಮಾಲತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ  ವಿನೀತ್, ಲಯನ್ ಸಚಿತ್ ರೈ, ಸಂಧ್ಯಾ ಸಚಿತ್ ರೈ, ಲಯನ್ ನವೀನ್ ಕುಮಾರ್ ಹಾಗೂ ಸಂಪಾಜೆ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಮತ್ತು ಸಂಪಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಲಯನ್ ಕಿಶೋರ್ ಸ್ವಾಗತಿಸಿ ಲೋಕನಾಥ್  ವಂದಸಿ, ಮಲ್ಲಿಕಾರ್ಜುನಪ್ಪ ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ ಯಶೋಧ  ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror