ಬಾಳಿಲ : 2019-20ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಯ ಪೂರ್ವಭಾವಿ ಸಭೆ ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಸಭೆಯನ್ನು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಉದ್ಘಾಟಿಸಿ ಇಲಾಖಾ ಗುಂಪಾಟ ಹಾಗು ಮೇಲಾಟಗಳ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಬೋಧಿನಿ ಪ್ರೌಢ ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ವಹಿಸಿದರು.
ವೇದಿಕೆಯಲ್ಲಿ ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣೇಶ್.ಪಿ, ಗ್ರೇಡ್ 1 ದೈಹಿಕ ಶಿಕ್ಷಕರ ಸಂಘ ರಾಜ್ಯ ಪರಿಷತ್ ಸದಸ್ಯ ಸಹದೇವ ಏರಾಜೆ, ದೈಹಿಕ ಶಿಕ್ಷಕರ ತಾಲೂಕು ಅಧ್ಯಕ್ಷೆ ವನಿತಾ ಕಾಂತಮಂಗಲ, ಗ್ರೇಡಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಧನಂಜಯ ಸಂಪಾಜೆ, ಸುಳ್ಯದ ಸ್ಪೋರ್ಟ್ ವನ್ ಮಾಲಕ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯೋಪಾಧ್ಯಾಯ ಯಶೋಧರ ನಾರಾಲು ಸ್ವಾಗತಿಸಿ, ದೈಹಿಕ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಶಿಕ್ಷಕ ಉದಯ್‍ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…