ಬಾಳಿಲ: ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 2018-19ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸುವ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲ ಯ ಸಂಚಾಲಕ ಗಣೇಶ್ ಪ್ರಸಾದ್ ಪ್ರತಿಭಾನ್ವಿತರನ್ನು ಪುರಸ್ಕರಿಸಿದರು.
ಬಾಳಿಲ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣರಾವ್ ಯು ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರತಿಭಾನ್ವಿತರನ್ನು ಹಿರಿಯ ಶಿಕ್ಷಕ ಯಶೋಧರ ಎನ್ ಪರಿಚಯಿಸಿದರು. ದತ್ತಿನಿಧಿ ಬಹುಮಾನಗಳ ಬಗ್ಗೆ ಉದಯಕುಮಾರ್ ರೈ ಎಸ್ ವಿವರಿಸಿದರು. ಇದೇ ಸಂದರ್ಭದಲ್ಲಿ ‘ಹಸ್ತಲಿಖಿತ ಪತ್ರಿಕೆ’ಯನ್ನು ಬಿಡುಗಡೆ ಗೊಳಿಸಲಾಯಿತು. ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಶಿಕ್ಷಕ ವೆಂಕಟೇಶ್ ಕುಮಾರ್ ಯು ವಿವರಣೆ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಅಕ್ಷತಾ ಎಂ ಹಾಗೂ ಪೋಷಕರ ಪರವಾಗಿ ಶ್ರೀನಿವಾಸ ಜೋಗಿಬೆಟ್ಟು ಅನಿಸಿಕೆ ವ್ಯಕ್ತಪಡಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಎಂ. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಲೋಕೇಶ್ ಬಿ ವಂದಿಸಿ, ಸಹಶಿಕ್ಷಿ ಸಹನಾ ಬಿ.ಬಿ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…