ಸುಬ್ರಹ್ಮಣ್ಯ: ಸುಳ್ಯ ತಾಲೂಕು ಬಾಳುಗೋಡು ಉಪ್ಪುಕಳ ನಿವಾಸಿ ವಿನುತಾ(20) ಎಂಬವರು ಸೋಮವಾರ ರಾತ್ರಿ ವಿಷ ಸೇವಿಸಿ ಅಸ್ವಸ್ಥಗೊಂಡು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು .ಮಂಗಳವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ವಿನುತ ಮಂಗಳೂರಿನಲ್ಲಿ ನರ್ಸಿಂಗ್ ತರಬೇತಿ ಪಡೆಯುತ್ತಿದ್ದರು. ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಯುಕ್ತ ನರ್ಸಿಂಗ್ ತರಬೇತಿಗೆ ರಜೆ ನೀಡಿದ್ದ ಕಾರಣ ಮನೆಗೆ ಬಂದಿದ್ದರು. ಯುವತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel