Advertisement
ಜಿಲ್ಲೆ

ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Share

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

18 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

18 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

18 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

18 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago