ಬೆಂಗಳೂರು: ಕರ್ನಾಟಕ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ವಿಸ್ತರಣೆಯಾಗಿದ್ದು, ಗುರುವಾರ ಬೆಳಗ್ಗೆ ಹತ್ತು ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನೂತನ ಸಚಿವರಾದ ಎಸ್ ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಡಾ.ಕೆ.ಸುಧಾಕರ್ , ಭೈರತಿ ಬಸವರಾಜ್, ಅರಬೈಲ್ ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ, ನಾರಾಯಣ ಗೌಡ ಮತ್ತು ಶ್ರೀಮಂತ ಪಾಟೀಲ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೂತನ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕರು ಕಾಣಿಸಿಕೊಳ್ಳಲಿಲ್ಲ. ಹಲವು ಮಂದಿ ಬಿಜೆಪಿ ನಾಯಕರು ಸಮಾರಂಭದಲ್ಲಿ ಗೈರು ಹಾಜರಾಗಿದ್ದರು. ಮುಖ್ಯವಾಗಿ ಸಚಿವಾಕಾಂಕ್ಷಿಗಳಾಗಿದ್ದ ಸಿ.ಪಿ.ಯೋಗೇಶ್ವರ್, ಉಮೇಶ್ ಕತ್ತಿ , ಮುರುಗೇಶ್ ನಿರಾಣಿ ಗೈರು ಹಾಜರಾಗಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…