ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಸುಳ್ಯದ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಎದುರು ಚಳುವಳಿ ನಡೆಸಲಿ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಬಿಜೆಪಿ ಘೋಷಿಸಿರುವ ಅಸಹಕಾರ ಚಳುವಳಿ ಜನರನ್ನು ಮೂರ್ಖರನ್ನಾಗಿ ಮಾಡುವ ನಾಟಕ. ಈ ನಾಟಕ ನಿಲ್ಲಿಸಿ ಸಚಿವ ಸ್ಥಾನ ಸಿಗುವ ತನಕ ರಾಜ್ಯ ಬಿಜೆಪಿ ಕಚೇರಿ ಎದುರು ಧರಣಿ ಮಾಡಿ ಎಂದರು.
ರಾಜಕೀಯವಾದ ಭಿನ್ನಾಭಿಪ್ರಾಯ ಇದ್ದರೂ ಸುಳ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಅಂಗಾರರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಚುನಾವಣಾ ಸಂದರ್ಭದಲ್ಲಿ ಅಂಗಾರರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮತ ಪಡೆದು ಕ್ಷೇತ್ರದ ಜನತೆಗೆ ಬಿಜೆಪಿ ಅನ್ಯಾಯ ಮಾಡಿದೆ.ಈ ಮೂಲಕ ಬಿಜೆಪಿಯ ದಲಿತ ವಿರೋಧಿ ನೀತಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೋಂಡಿದ್ದು ರಾಜ್ಯ ಸರಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…