ಬಿಜೆಪಿಯಿಂದ ದ್ವೇಷ ರಾಜಕಾರಣ: ಮಹಿಳಾ ಕಾಂಗ್ರೆಸ್ ಟೀಕೆ

September 4, 2019
3:33 PM

ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಬ್ಲಾಕ್ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.

ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ದುರುದ್ದೇಶದಿಂದ ನಡೆದಿದೆ. ಇದನ್ನು ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿದ್ದಾರೆ.‌ ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆ ಮಾಚಲು ಈ ರೀತಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು. ಡಿ.ಕೆ.ಶಿ ಬಂಧನ ಖಂಡಿಸಿ ಸೆ.6 ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಪ್ರಮುಖರಾದ ತಿರುಮಲೇಶ್ವರಿ ಅರ್ಭಡ್ಕ, ಪ್ರವೀಣಾ ರೈ ಮರುವಂಜ, ಮೊಹಿನಿ ಪೆಲ್ತಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror