ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಬ್ಲಾಕ್ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.
ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ದುರುದ್ದೇಶದಿಂದ ನಡೆದಿದೆ. ಇದನ್ನು ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿದ್ದಾರೆ. ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆ ಮಾಚಲು ಈ ರೀತಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು. ಡಿ.ಕೆ.ಶಿ ಬಂಧನ ಖಂಡಿಸಿ ಸೆ.6 ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಪ್ರಮುಖರಾದ ತಿರುಮಲೇಶ್ವರಿ ಅರ್ಭಡ್ಕ, ಪ್ರವೀಣಾ ರೈ ಮರುವಂಜ, ಮೊಹಿನಿ ಪೆಲ್ತಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…