ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡತ್ತಿದೆ ಎಂದು ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಫಟಕ ಆರೋಪಿಸಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಮುಖಾಂತರ ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿಕೊಂಡು ಬಂದಿಸಿದ್ದಾರೆ. ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಈ ರೀತಿಯ ದ್ವೇಷದ ರಾಜಕಾರಣ ಮಾಡುತ್ತಿದೆ. ಇಂತಹಾ ಕೃತ್ಯವನ್ನು ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ಲಾಕ್ ಅಲ್ಪಾಂಖ್ಯಾತ ಘಟಕದ ಅಧ್ಯಕ್ಷ ಜಿ.ಕೆ ಹಮೀದ್ ಮತ್ತು ಪ್ರದಾನ ಕಾರ್ಯದರ್ಶಿ ಜಲೀಲ್ ಎ.ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel