ಸುಳ್ಯ: ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲ ಮಟ್ಟದ ಜನಸಂವಾದ ವರ್ಚುವಲ್ ರ್ಯಾಲಿ ಜುಲೈ ಎರಡರಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಯ ಮುಖಾಂತರ ನಡೆದಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಶಾಸಕ ಎಸ್. ಅಂಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಬಿಜೆಪಿ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಹಾಗೂ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಕೇಶವ ಭಟ್ ಮುಳಿಯ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ಜಿ ನಾಯಕ್ ಮತ್ತು ಜಿಲ್ಲೆಯ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್ ಉಪಸ್ಥಿತರಿದ್ದರು. ಸುಳ್ಯ ಮಂಡಲ ಕಾರ್ಯದರ್ಶಿ ಇಂದಿರಾ ಬಿ.ಕೆ. ಸ್ವಾಗತಿಸಿದರು.
ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ ಧನ್ಯವಾದ ಅರ್ಪಿಸಿದರು ಮತ್ತು ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವನ್ನು ಸುಮಾರು 2000 ಜನ ಸುಳ್ಯ ಮಂಡಲದ ಕಾರ್ಯಕರ್ತರು ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಮುಖಾಂತರ ವೀಕ್ಷಣೆ ಮಾಡಿದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…