ಸುಳ್ಯ: ಜಾಲ್ಸೂರು ಗ್ರಾಮ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ರಾಜಿನಾಮೆಯನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಅಡ್ಡಮತದಾನದ ಇಫೆಕ್ಟ್.? :
ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ಸತೀಶ್ ಕೆಮನಬಳ್ಳಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಯಾಗಿದ್ದರು. ಏಳು ಮಂದಿ ಅಡ್ಡಮತದಾನ ಮಾಡಿದ ಕಾರಣ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಗಿತ್ತು. ಈ ಹಿನ್ನಲೆಯಲ್ಲಿ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕು ಎಂದು ಸಂಘ ಪರಿವಾರ ಸೂಚಿಸಿತ್ತು. ಆದರೆ ಕೆಲವೇ ಕೆಲವು ಮಂದಿ ಮಾತ್ರ ರಾಜಿನಾಮೆ ನೀಡಿದ್ದರು. ಇದರಿಂದ ಎಲ್ಲಾ 17 ಮಂದಿಯ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಸತೀಶ್ ಕೆಮನಬಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಸೊಸೈಟಿ ಅಧ್ಯಕ್ಷತೆಗೆ ರಾಜಿನಾಮೆ ಇಲ್ಲ:
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಾನು ಸಹಕಾರ ಭಾರತಿ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿದ್ದೇನೆ. ಆದ ಕಾರಣ ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸದ್ಯ ರಾಜಿನಾಮೆ ನೀಡುವುದಿಲ್ಲ ಎಂದು ಸತೀಶ್ ಕೆಮನಬಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಸಹಕಾರಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲೂ ನಿರ್ಧರಿಸಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯಿಂದ ಕ್ರಮ ಶೀಘ್ರ:
ಅಡ್ಡ ಮತದಾನಕ್ಕೆ ಸಂಬಂಧಿಸಿ ಚುನಾವಣಾ ಪ್ರತಿನಿಧಿಗಳಾಗಿದ್ದ 17 ಮಂದಿಯೂ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಕಡೆಯಿಂದ ಖಡಕ್ ಆದೇಶ ನೀಡಿದರೂ ಬಹುತೇಕ ಮಂದಿಯೂ ಕ್ಯಾರೇ ಎನ್ನಲಿಲ್ಲ. ಬೆರಳೆಣಿಕೆಯ ಮಂದಿ ಮಾತ್ರ ರಾಜಿನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ಏನು ಕ್ರಮ ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಹಲವು ಸುತ್ತಿನ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದೆ.
ಪಕ್ಷದ ಸ್ಥಾನಮಾನಗಳಿಂದ ಮುಕ್ತಗೊಳಿಸುವುದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು, ಉಚ್ಚಾಟನೆ ಸೇರಿದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …
ಬೇಸಿಗೆಯಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…