ಸುಳ್ಯ: ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಅಧ್ಯಕ್ಷನಾಗಲು ಅರ್ಹ. ಇಲ್ಲಿ ನಾನು ನಿಮ್ಮ ಪ್ರತಿನಿಧಿ ಅಷ್ಟೆ. ರಾಜ್ಯಾಧ್ಯಕ್ಷ ಎಂಬುದು ಹುದ್ದೆಯಲ್ಲ, ಅದು ಮಹತ್ತರವಾದ ಜವಾಬ್ಧಾರಿ. ಪಕ್ಷದ ಕಾರ್ಯಕರ್ತರ ನಂಬಿಕೆಗೆ ಚ್ಯುತಿ ಬಾರದಂತೆ ಆ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ನೀವು ಅರ್ಪಿಸಿದ ಸನ್ಮಾನ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಸಂದದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿ ಸುಳ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲೋಕಸಭೆಯಲ್ಲಿ 64 ಪಕ್ಷಗಳ ಪ್ರತಿನಿಧಿಗಳಿದ್ದಾರೆ. 63 ಪಕ್ಷಗಳು ವಂಶ ಪಾರಂಪರ್ಯ ಮತ್ತು ಜಾತಿಯ ಆಧಾರದಲ್ಲಿ ಆಯ್ಕೆ ನಡೆಸುತ್ತಿದ್ದರೆ, ಬಿಜೆಪಿಯಲ್ಲಿ ಮಾತ್ರ ಪ್ರಜಾಪ್ರಭುತ್ವದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ ಎಂದು ಅವರು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಪ್ಲಸ್ ಸ್ಥಾನ:
ಮುಂದಿನ ಮೂರು ವರ್ಷ ಬಿಜೆಪಿ ಸರಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದಕ್ಕೆ ಹದಿನೈದು ಸ್ಥಾನಗಳನ್ನೂ ಗೆಲ್ಲಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರೈವತ್ತು ಪ್ಲಸ್ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ಹೇಳಿದರು. ಹಿರಿಯರ ಮಾರ್ಗದರ್ಶನ ಮತ್ತು ಕಾರ್ಯಕರ್ತರ ಪಡೆಯೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಅವರು ಹೇಳಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಎ.ವಿ.ತೀರ್ಥರಾಮ, ನ.ಪಂ. ಮಾಜಿ ಅಧ್ಯಕ್ಷರಾದ ಎನ್.ಎ. ರಾಮಚಂದ್ರ, ಪ್ರಕಾಶ್ ಹೆಗ್ಡೆ, ಪ್ರಮುಖರಾದ ಪಿ.ಕೆ. ಉಮೇಶ್, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…