Advertisement
ಸುದ್ದಿಗಳು

ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರಾ ನಳಿನ್ ಕುಮಾರ್ ಕಟೀಲು ?

Share

# ಸ್ಪೆಶಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ


ಮಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸರಕಾರ ರಚನೆ ಮಾಡಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕಮಾಂಡ್  ನಿಂದ ಇದುವರೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ನಡುವೆ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು  ಮೂಲಗಳು ತಿಳಿಸಿವೆ.

ಈ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ನೇಮಕವಾಗಲಿದ್ದಾರೆ , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇರ ಸಂಪರ್ಕ ಹಾಗೂ ನಿಷ್ಟಾವಂತ ಸ್ವಯಂ ಸೇವಕ ಎಂಬ ನೆಲೆಯಲ್ಲಿ ಹಾಗೂ ಸಂಘಟನೆಯಲ್ಲಿ ಎತ್ತಿದ ಕೈಯಾಗಿರುವ ನಳಿನ್ ಅವರಿಗೆ  ರಾಜ್ಯಾಧ್ಯಕ್ಷ ಪಟ್ಟ  ಲಭ್ಯವಾಗಲಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಹೊರತುಪಡಿಸಿ ಇತರ ಯಾರಿಗಾದರೂ ನೀಡಿ ಯಡಿಯೂರಪ್ಪ ಅವರಿಗೆ ಪ್ರಮುಖ ರಾಜ್ಯದ ರಾಜ್ಯಪಾಲ ಹುದ್ದೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. `

ಈ ಬಾರಿ ಬಿಜೆಪಿ ಸರಕಾರ ರಚನೆಯಾದರೆ  ಕಳೆದ ಬಾರಿಯಂತೆ ಯಾವುದೇ ರೀತಿಯಲ್ಲೂ ಗೊಂದಲ ಏರ್ಪಡಬಾರದು ಹಾಗೂ ಶಾಸಕರಾಗಿ ಉತ್ತಮ ಕೆಲಸ ಮಾಡಿರುವ ಹಾಗೂ ಕ್ಷೇತ್ರದಲ್ಲೂ ಉತ್ತಮ ಅಭಿಪ್ರಾಯ ಹೊಂದಿರುವ ಮಂದಿಗೆ ಸಚಿವ ಸ್ಥಾನ ನೀಡಲು ಯೋಚನೆ ನಡೆದಿದೆ. ಜಾತಿ ಲೆಕ್ಕಾಚಾರದಲ್ಲಿ ಯಾವುದೇ ಸ್ಥಾನ ನೀಡದೇ ಇರಲು ಈ ಬಾರಿ ಚಿಂತನೆ ನಡೆದಿದ್ದು  ಭ್ರಷ್ಟಾಚಾರ ಸೇರಿದಂತೆ ಯಾವುದೇ ಕಪ್ಪುಚುಕ್ಕೆ ಇದ್ದರೆ ಅಂತಹವರಿಗೂ ಸಚಿವ ಸ್ಥಾನ ನೀಡದೇ ಇರಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸರಕಾರ ರಚನೆ ಮಾಡುವುದಾದರೆ ಇದೆಲ್ಲಾ ಗಮನಿಸಿಯೇ ರಚನೆ ಮಾಡಲು  ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

48 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago