ಬಿಜೆಪಿ ಸಂಘಟನಾ ಪರ್ವ :ಬೆಳಂದೂರು ಮಹಾಶಕ್ತಿ ಕೇಂದ್ರದ ಸಭೆ

July 6, 2019
8:24 PM

ಸವಣೂರು : ಎಲ್ಲ ಜಾತಿ, ಮತ, ಪ್ರದೇಶಗಳಲ್ಲಿ ಬಿಜೆಪಿ ಸದಸ್ಯತ್ವ ಮಾಡುವ ಮೂಲಕ ಪ್ರತೀ ಬೂತ್‍ನಲ್ಲಿ ಅತೀ ಹೆಚ್ಚಿನ ಸಂಖ್ಯೆ ಸದಸ್ಯರ ನೋಂದಣಿ ಮಾಡ ಬೇಕು. ಸಂಘಟನೆಯು ಪಕ್ಷದ ಮೂಲಭೂತ ಶಕ್ತಿಯಾಗಿದೆ. ಸದಸ್ಯತ್ವ ಮಾಡುವ ಮೂಲಕ ಆ ಶಕ್ತಿ ಇನ್ನಷ್ಟು ಬಲಪಡಿಸಬೇಕಾಗಿದೆ ಎಂದು ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು.

Advertisement
Advertisement
Advertisement

ಅವರು ಸವಣೂರು ಯುವ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್ ಮಾತನಾಡಿ, ಆಂತರಿಕ ಪ್ರಜಾಪ್ರಭುತ್ವಕ್ಕೆ ಬಲ ತುಂಬಲು ಈ ವ್ಯವಸ್ಥೆ ಅನುಕೂಲವಾಗಿದೆ.ಜನರು ಬಿಜೆಪಿ ಸದಸ್ಯರಾಗಲು ಸಿದ್ಧರಿದ್ದಾರೆ. ನಾವು ಅವರ ಬಳಿ ಹೋಗಬೇಕಾಗಿದೆ.ಎಲ್ಲಾ ಬೂತ್‍ನಲ್ಲಿ ಗುರಿ ತಲುಪಬೇಕು ಎಂದರು.
ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ವಂಶ ಪಾರಂಪರ್ಯದ ರಾಜಕಾರಣಕ್ಕೆ ಜೋತು ಬಿದ್ದ ಕಾರಣ ಬಿಜೆಪಿ ಹೊರತುಪಡಿಸಿ, ಬೇರೆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯ ಮಹಾ ಸಂಘಟನಾ ಪರ್ವದಲ್ಲಿ ಅತೀ ಹೆಚ್ಚು ಸದಸ್ಯರಾಗಬೇಕು.ಅಭಿವೃದ್ದಿ ಕಾರ್ಯಗಳು ನಡೆಯುವ ಸಂದರ್ಭ ಆಯಾ ಬೂತ್‍ನ ಕಾರ್ಯಕರ್ತರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಬೆಳಂದೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಆಲಡ್ಕ, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ತಾ.ಪಂ.ಸದಸ್ಯರಾದ ಲಲಿತಾ ಈಶ್ವರ ಚಾರ್ವಾಕ,ತಾರಾ ಅಲಂಕಾರು, ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯರಾದ ಗಿರಿಶಂಕರ ಸುಲಾಯ,ರಾಜೀವಿ ಶೆಟ್ಟಿ,ಗಾಯತ್ರಿ ಬರೆಮೇಲು,ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ,ಕಾಣಿಯೂರು ಗ್ರಾ.ಪಂ ಅಧ್ಯಕ್ಷೆ ಮಾಧವಿ ಕೋಡಂದೂರು,ಬೆಳಂದೂರು ಗ್ರಾ.ಪಂ.ಉಪಾಧ್ಯಕ್ಷ ಹರೀಶ್ ಕೆರೆನಾರು,ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುನಂದಾ ಬಾರ್ಕುಳಿ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ನಿರ್ದೇಶಕರಾದ ನಾರಾಯಣ ಗೌಡ ಪೂವ, ವೇದಾವತಿ ಕೆಡೆಂಜಿ,ಸವಣೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ಉಪಾಧ್ಯಕ್ಷ ಗೋಪಾಲಕೃಷ್ಣ ಆರೇಲ್ತಡಿ,ನಿರ್ದೇಶಕ ಪ್ರಜ್ವಲ ಕೆ.ಆರ್,ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ,ಸುರೇಶ್ ರೈ ಸೂಡಿಮುಳ್ಳು,ಜಯಪ್ರಶಾಂತ್ ಪಾಲ್ತಾಡಿ,ತೀರ್ಥರಾಮ ಕೆಡೆಂಜಿ,ಹರೀಶ ಕುಕ್ಕುಜೆ ,ಅನಿತಾ ಬೇರಿಕೆ,ವೇದಾ ದಯಾನಂದ ,ಸಂಜೀವ ಮೊದಲಾದವರಿದ್ದರು.
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು
January 23, 2025
10:59 AM
by: The Rural Mirror ಸುದ್ದಿಜಾಲ
ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ
January 23, 2025
10:50 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |
January 23, 2025
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror