ಸವಣೂರು : ಎಲ್ಲ ಜಾತಿ, ಮತ, ಪ್ರದೇಶಗಳಲ್ಲಿ ಬಿಜೆಪಿ ಸದಸ್ಯತ್ವ ಮಾಡುವ ಮೂಲಕ ಪ್ರತೀ ಬೂತ್‍ನಲ್ಲಿ ಅತೀ ಹೆಚ್ಚಿನ ಸಂಖ್ಯೆ ಸದಸ್ಯರ ನೋಂದಣಿ ಮಾಡ ಬೇಕು. ಸಂಘಟನೆಯು ಪಕ್ಷದ ಮೂಲಭೂತ ಶಕ್ತಿಯಾಗಿದೆ. ಸದಸ್ಯತ್ವ ಮಾಡುವ ಮೂಲಕ ಆ ಶಕ್ತಿ ಇನ್ನಷ್ಟು ಬಲಪಡಿಸಬೇಕಾಗಿದೆ ಎಂದು ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು.
ಅವರು ಸವಣೂರು ಯುವ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್ ಮಾತನಾಡಿ, ಆಂತರಿಕ ಪ್ರಜಾಪ್ರಭುತ್ವಕ್ಕೆ ಬಲ ತುಂಬಲು ಈ ವ್ಯವಸ್ಥೆ ಅನುಕೂಲವಾಗಿದೆ.ಜನರು ಬಿಜೆಪಿ ಸದಸ್ಯರಾಗಲು ಸಿದ್ಧರಿದ್ದಾರೆ. ನಾವು ಅವರ ಬಳಿ ಹೋಗಬೇಕಾಗಿದೆ.ಎಲ್ಲಾ ಬೂತ್‍ನಲ್ಲಿ ಗುರಿ ತಲುಪಬೇಕು ಎಂದರು.
ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ವಂಶ ಪಾರಂಪರ್ಯದ ರಾಜಕಾರಣಕ್ಕೆ ಜೋತು ಬಿದ್ದ ಕಾರಣ ಬಿಜೆಪಿ ಹೊರತುಪಡಿಸಿ, ಬೇರೆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯ ಮಹಾ ಸಂಘಟನಾ ಪರ್ವದಲ್ಲಿ ಅತೀ ಹೆಚ್ಚು ಸದಸ್ಯರಾಗಬೇಕು.ಅಭಿವೃದ್ದಿ ಕಾರ್ಯಗಳು ನಡೆಯುವ ಸಂದರ್ಭ ಆಯಾ ಬೂತ್‍ನ ಕಾರ್ಯಕರ್ತರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಬೆಳಂದೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಆಲಡ್ಕ, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ತಾ.ಪಂ.ಸದಸ್ಯರಾದ ಲಲಿತಾ ಈಶ್ವರ ಚಾರ್ವಾಕ,ತಾರಾ ಅಲಂಕಾರು, ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯರಾದ ಗಿರಿಶಂಕರ ಸುಲಾಯ,ರಾಜೀವಿ ಶೆಟ್ಟಿ,ಗಾಯತ್ರಿ ಬರೆಮೇಲು,ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ,ಕಾಣಿಯೂರು ಗ್ರಾ.ಪಂ ಅಧ್ಯಕ್ಷೆ ಮಾಧವಿ ಕೋಡಂದೂರು,ಬೆಳಂದೂರು ಗ್ರಾ.ಪಂ.ಉಪಾಧ್ಯಕ್ಷ ಹರೀಶ್ ಕೆರೆನಾರು,ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುನಂದಾ ಬಾರ್ಕುಳಿ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ನಿರ್ದೇಶಕರಾದ ನಾರಾಯಣ ಗೌಡ ಪೂವ, ವೇದಾವತಿ ಕೆಡೆಂಜಿ,ಸವಣೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ಉಪಾಧ್ಯಕ್ಷ ಗೋಪಾಲಕೃಷ್ಣ ಆರೇಲ್ತಡಿ,ನಿರ್ದೇಶಕ ಪ್ರಜ್ವಲ ಕೆ.ಆರ್,ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ,ಸುರೇಶ್ ರೈ ಸೂಡಿಮುಳ್ಳು,ಜಯಪ್ರಶಾಂತ್ ಪಾಲ್ತಾಡಿ,ತೀರ್ಥರಾಮ ಕೆಡೆಂಜಿ,ಹರೀಶ ಕುಕ್ಕುಜೆ ,ಅನಿತಾ ಬೇರಿಕೆ,ವೇದಾ ದಯಾನಂದ ,ಸಂಜೀವ ಮೊದಲಾದವರಿದ್ದರು.
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ,ವಂದಿಸಿದರು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…