ಸುಳ್ಯ:ದೇಶದಾದ್ಯಂತ ಬಿಜೆಪಿಯ ಸದಸ್ಯತ್ವ ಅಭಿಯಾನ ನಡೆಯುತಿದೆ. ಜೊತೆಗೆ ಅವಧಿ ಪೂರ್ತಿಯಾದ ಬೂತ್ ಸಮಿತಿ, ಮಂಡಲ ಸಮಿತಿ ಪುನರ್ ರಚನೆಯ ಕಾರ್ಯಗಳೂ ಪ್ರಗತಿಯಲ್ಲಿದೆ.
ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಬೂತ್ ಸಮಿತಿಗಳ ರಚನೆ ಬಹುತೇಕ ಪೂರ್ತಿಯಾಗಿದ್ದು ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿಯ ಪಟ್ಟಿಯನ್ನು ರಾಜ್ಯಾಧ್ಯಕ್ಷರಿಗೆ ಹಸ್ತಾಂತರಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ 227 ಸಮಿತಿಗಳ ರಚನೆ ಪೂರ್ತಿಯಾಗಿದೆ. 221 ಸಮಿತಿಗಳ ಪಟ್ಟಿಯನ್ನು ಮಂಡಲ ಸಮಿತಿ ಪದಾಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸದಸ್ಯರ ಸಭೆ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮಂಡಲ ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಒಂದೆರಡು ದಿನದಲ್ಲಿ ಬೂತ್ ಸಮಿತಿಗಳ ರಚನೆ ಪೂರ್ತಿಯಾಗಲಿದೆ. ಬಳಿಕ ಮಂಡಲ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅ.31ರೊಳಗೆ ನೂತನ ಬಿಜೆಪಿ ಮಂಡಲ ಸಮಿತ ಅಸ್ತಿತ್ವಕ್ಕೆ ಬರಲಿದೆ ಎಂದು ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದರೆ.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಮತ್ತಿತರರು ಸೇರಿ ಬೂತ್ ಸಮಿತಿ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದರು.
ಸುಳ್ಯ ಸಂಘಟನಾ ಶಕ್ತಿಗೆ ನಳಿನ್ ಶ್ಲಾಘನೆ:ಸುಳ್ಯದ ಬಿಜೆಪಿ ಸಂಘಟನಾ ಶಕ್ತಿಯನ್ನು ನಳಿನ್ ಕುಮಾರ್ ಕಟೀಲ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಅಧಿಕಾರದಿಂದ ಅಲ್ಲ, ಬದಲಾಗಿ ಆದರ್ಶದಿಂದ ಪಕ್ಷ ಸಂಘಟನೆ ಮಾಡಬೇಕು. ಸುಳ್ಯ ಕ್ಷೇತ್ರದ ಸಂಘಟನಾ ಶಕ್ತಿ ದೇಶಕ್ಕೆ ಆದರ್ಶ ಎಂದು ಹೇಳಿದರು. ಸುಳ್ಯ ಕ್ಷೇತ್ರ ಕಾರ್ಯಕರ್ತರ ಪುಣ್ಯ ಎಂದು ಅವರು ಬಣ್ಷಿಸಿದರು. ರಾಜ್ಯದಲ್ಲಿಯೇ ಪ್ರಥಮವಾಗಿ ಸುಳ್ಯದಿಂದ ಪ್ರಥಮವಾಗಿ ಪದಾಧಿಕಾರಿಗಳ ಪಟ್ಟಿ ದೊರೆತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…