ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement