ಪುತ್ತೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು, ಈ ಸಂಬಂಧ ನಿರ್ಮಲಾ ಸೀತಾರಾಮನ್ ಅವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ.ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿರುತ್ತಾರೆ.
ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…