ಮಂಗಳೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು ಈ ಸಂಬಂಧ ನಿರ್ಮಲಾ ಸೀತಾರಾಮನ್ ರವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ. ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿದರು.
ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…