ಮಂಗಳೂರು: ದ. ಕ. ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 11 ದಿನಗಳಿಂದ ಕೊರೊನಾ ವೈರಸ್ ಹೊಸಪ್ರಕರಣಗಳು ಇಲ್ಲದೇ ಇರುವುದು ಜಿಲ್ಲೆಯ ಮಟ್ಟಿಗೆ ಶುಭವಾರ್ತೆ. ಈ ನಡುವೆ ಜಿಲ್ಲೆಯಲ್ಲಿ 12 ಜನ ಸೋಂಕಿತರಲ್ಲಿ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಬುಧವಾರ ಸುಮಾರು 42 ಮಂದಿಯ ಪರೀಕ್ಷಾ ಮಾದರಿಗಳು ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು ಇದೇ ದಿನ 15 ಮಂದಿಯನ್ನು ನಿಗಾದಲ್ಲಿರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ 658 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರ ಪೈಕಿ 511 ಮಂದಿಯ ವರದಿ ಲಭ್ಯವಾಗಿದೆ. 498 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು 25 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಬುಧವಾರದಂದು 22 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಕೇವಲ ಮೂವರು ಕೊರೊನಾ ಸೋಂಕಿತರಲ್ಲಿ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನೊಬ್ಬರು ಚಿತ್ಸೆಯಲ್ಲಿದ್ದಾರೆ.
ರಾಜ್ಯದಲ್ಲಿ ಬುಧವಾರ ಒಂದೇ ದಿನವೇ ಒಟ್ಟು 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 279 ಸೋಂಕಿತರಲ್ಲಿ ಈಗಾಗಲೇ 80 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ವರದಿಯಾಗಿಲ್ಲ. ಈ ನಡುವೆ ಬುಧವಾರ ಇಡೀ ಕೇರಳದಲ್ಲಿ ಕೇವಲ ಒಂದೇ ಒಂದು ಪ್ರಕರಣ ದಾಖಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಇದುವರೆಗೆ 83 ಮಂದಿ ಗುಣಮುಖರಾಗಿದ್ದು, ಇನ್ನು 84 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…