ಕಡಬ: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2019-20 ನೇ ಸಾಲಿನ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ಸ್ವಯಂಸೇವಕ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.
ಪುತ್ತೂರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ರಾಮಚಂದ್ರ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿ ಸ್ವಯಂಸೇವಕರಾಗಿ ಸಮಾಜ ಸೇವೆ ಮಾಡಲು ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಮಾಜಿಕ ಕಳಕಳಿಗೆ ಮಹತ್ವ ನೀಡಿದಾಗ ಭವಿಷ್ಯದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ. ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊ¼ಂಡು ವಿದ್ಯಾಭ್ಯಾಸ ದೊಂದಿಗೆ ವ್ಯಕ್ತಿತ್ವವನ್ನು ಶ್ರೀಮಂತಗೊಳಿಸಿಕೊಳ್ಳಬೇಕು ಎಂದರು.
ರಾ.ಸೇ.ಯೋಜನಾ ಸಂಯೋಜನಾಧಿಕಾರಿ ಸ್ವಾಮಿ.ಎಸ್.ಬೈಲಕುಪ್ಪ ರಾ.ಸೇ.ಯೋಜನೆಯ ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಚಾರ್ಯ ಪ್ರೊ .ಪದ್ಮನಾಭ.ಕೆ ಅದ್ಯಕ್ಷತೆ ವಹಿಸಿದ್ದರು. ರಾ.ಸೇ.ಯೋ.ಘಟಕದ ನಾಯಕ ಪ್ರೇಮನಾಥ ಸ್ವಾಗತಿಸಿದರು. ನಾಯಕಿ ಧನ್ಯಶ್ರೀ ವಂದಿಸಿದರು. ವಿದ್ಯಾರ್ಥಿನಿ ಮಹಾದೇವಿ ನಿರೂಪಿಸಿದರು.