ಬೆಳಂದೂರು : ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆ

September 15, 2019
3:00 PM

ಬೆಳಂದೂರು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಇತಿಹಾಸ ವಿಭಾಗದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು..

Advertisement
Advertisement

ಈ ಸಂದರ್ಭ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು  ಹರೀಶ್ ಶಾಂತಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಶ್ರೀ ನಾರಾಯಣ ಗುರು ವೈದಿಕ ಸಮಿತಿ ,ಮಂಗಳೂರು ಇವರು ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಅವರ ಸಮಾಜ ಸುಧಾರಣೆಯ ಮಹತ್ವವನ್ನು ತಿಳಿಸುತ್ತಾ ಪ್ರಸ್ತುತ ಸಮಾಜದ ಅಸಮಾನತೆಗಳನ್ನು ,ಅನ್ಯಾಯಗಳನ್ನು ,ತಾರತಮ್ಯಗಳನ್ನು ಮೌಡ್ಯಗಳನ್ನು ನಿವಾರಿಸಲು ವಿದ್ಯಾರ್ಥಿಗಳು ಕಟಿಬದ್ಧರಾದರೆ ಸಮಾನ ಸಮಾಜದ ಮಹಾತ್ಮರ ಕನಸನ್ನು ಸಾಕಾರ ಗೊಳಿಸಲು ಸಾಧ್ಯ ಎಂದು ತಿಳಿಸಿದರು.

ವಿಶ್ವನಾಥ ಮಾರ್ಕಜೆ ದ್ವೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲರಾದ ಪ್ರೊ.ಪದ್ಮನಾಭ. ಕೆ ಅಧ್ಯಕ್ಷತೆ ವಹಿಸಿದ್ದರು ,ರಾಷ್ಟ್ರೀಯ ಸೇವಾ ಯೋಜನೆ ಯೋಜನಾಕಾರಿ ಶ್ರೀ.ಸ್ವಾಮಿ.ಎಸ್ ಬೈಲಕುಪ್ಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು.ಸಂಶೀನಾ ತೃತೀಯ ಬಿಎ ಸರ್ವರನ್ನು ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರೆ,ಕು.ಕೀರ್ತಿಕಾ ವಂದಿಸಿದರು.ಕು.ಕೃತಿಕಾ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror