ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಯುವಜನೋತ್ಸವ ಇನ್‍ಸಿಗ್ನಿಯ-2019ರಲ್ಲಿ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಪಡೆದು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.
ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಮೇಳದಲ್ಲಿ ಭರತನಾಟ್ಯ ವೈಯಕ್ತಿಕ ವಿಭಾಗದಲ್ಲಿ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿನಿ ಶಮಾ ಪ್ರಣಮ್ಯ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಜಾನಪದ/ಬುಡಕಟ್ಟು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಮಿಟ್ಸು ಜಾಸ್ಮಿನ್ ಅಂದ್ರಾದೆ, ಅಪೂರ್ವ.ಪಿ, ಶ್ರೀಪಂಚಮಿ.ಎನ್, ಶ್ರದ್ದಾ.ಬಿ.ಡಿ, ಧರಿತ್ರಿ, ವಿಶ್ವಾಸ್.ಎಂ.ಎಸ್, ವಿನೀತ್.ಜೆ.ವಿ, ಹಿತೇಶ್.ಪಿ, ಭಾಗ್ಯರಾಜ್.ಬಿ.ಕೆ ಮತ್ತು ಯು.ಅಭಿಷೇಕ್ ನಾಯಕ್ ಇವರ ತಂಡವು ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಲತಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಬಾಗವಹಿಸಿದ್ದರು.
ರಾಜ್ಯಾದ್ಯಂತ ಒಟ್ಟು 90 ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಇದರಲ್ಲಿ ಪಾಲ್ಗೊಂಡಿದ್ದವು ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.