ಬೆಳ್ತಂಗಡಿಗೆ ಮುಖ್ಯಮಂತ್ರಿ‌ ಬಿ.ಎಸ್ ಯಡಿಯೂರಪ್ಪ ಭೇಟಿ

August 12, 2019
3:11 PM

ಬೆಳ್ತಂಗಡಿ: ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು ರೂಪಾಯಿ 5 ಲಕ್ಷ, ಭಾಗಶಃ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೆಯೇ ಸಂತ್ರಸ್ತರಿಗೆ ತಕ್ಷಣದಲ್ಲಿ ರೂಪಾಯಿ 10,000.00 ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವವರೆಗೆ ಮಾಸಿಕ 5000.00 ರೂಪಾಯಿ ಬಾಡಿಗೆ ನೀಡಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಿದರು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರುಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ವಿಧಾನಪರಿಷತ್ ಸದಸ್ಯರಾದ  ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಧಿಕಾರಿ ವರ್ಗ ಮುಖ್ಯಮಂತ್ರಿಗಳ ಜೊತೆಗಿದ್ದರು.

Advertisement

ಅತೀ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group