ಬೆಳ್ತಂಗಡಿ: ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು ರೂಪಾಯಿ 5 ಲಕ್ಷ, ಭಾಗಶಃ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಗೆಯೇ ಸಂತ್ರಸ್ತರಿಗೆ ತಕ್ಷಣದಲ್ಲಿ ರೂಪಾಯಿ 10,000.00 ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವವರೆಗೆ ಮಾಸಿಕ 5000.00 ರೂಪಾಯಿ ಬಾಡಿಗೆ ನೀಡಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಿದರು.
ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರುಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಧಿಕಾರಿ ವರ್ಗ ಮುಖ್ಯಮಂತ್ರಿಗಳ ಜೊತೆಗಿದ್ದರು.
ಅತೀ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…