ಬೆಳ್ತಂಗಡಿ :ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಆವರಣದಲ್ಲಿ ಸಿರಿ ಗ್ರಾಮೋದ್ಯೋಗ ಸಂಸ್ಥೆ ಆಶ್ರಯದಲ್ಲಿ ನೂತನ ಸಿರಿಧಾನ್ಯ ಕೆಫೆ ಉದ್ಘಾಟನೆಗೊಂಡಿತು.
ಧರ್ಮಸ್ಥಳದ ಶ್ರದ್ಧಾ ಅಮಿತ್ ಸಿರಿಧಾನ್ಯ ಕೆಫೆಯನ್ನು ಉದ್ಘಾಟಿಸಿ, ಇಂದು ಪಾಶ್ಚಾತ್ಯ ಆಹಾರ ಪದ್ಧತಿಯ ಅವಲಂಬನೆ ಹೆಚ್ಚಾಗುತ್ತಿದ್ದು, ಭಾರತೀಯ ಮೂಲ ಆಹಾರ ಪದ್ಧತಿ ಮರೆಯಾಗುತ್ತಿದೆ. ಸಿರಿಧಾನ್ಯದಂತಹ ಪಾರಂಪರಿಕ ಆಹಾರ ಪದ್ಧತಿಯಿಂದ ಆರೋಗ್ಯ ವರ್ಧನೆಯಾಗುತ್ತದೆ ಎಂದು ಹೇಳಿದರು. ಮಾತೆಯರು ತಮ್ಮ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಲು ಆಹಾರ ತಜ್ಞರಾಗುವ ಅವಶ್ಯಕತೆ ಇದೆ. ನಮ್ಮ ಹಿರಿಯರು ಅನುಸರಿಸುತ್ತಿದ್ದ ಪಾರಂಪರಿಕ ಆಹಾರ ಪದ್ಧತಿಯ ನಿರ್ಲಕ್ಷ ಹಾಗೂ ಪಾಶ್ಚಾತ್ಯ ಆಹಾರ ಕ್ರಮದ ಅವಲಂಬನೆಯಿಂದಾಗಿ ಇಂದು ಸಣ್ಣ ಮಕ್ಕಳು ಅನೇಕ ರೋಗಗಳಿಂದ ಪೀಡಿತರಾಗುತ್ತಾರೆ. ಆದುದರಿಂದ ನಾವು ನಮ್ಮ ಮೂಲ ಆಹಾರ ಪದ್ಧತಿಯನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸಬೇಕು ಎಂದು ಅವರು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ ಧಾರವಾಡದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕ ಹಾಗೂ ಪ್ರಯೋಗಲಾಯ ನಿರ್ಮಿಸಲಾಗಿದೆ. ಸಿರಿ ಸಿರಿಧಾನ್ಯ ಬೆಳೆಗಾರರಿಗೆ ಇದರಿಂದ ತುಂಬಾ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ದೇಹಕ್ಕೆ ತಂಪು ನೀಡುವ ಸಿರಿಧಾನ್ಯ ಬಳಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಉಪಯುಕ್ತವಾದುದರಿಂದ ಸಿರಿಧಾನ್ಯ ಕೆಫೆ ಪ್ರಾರಂಭಿಸಲಾಗಿದೆ ಎಂದರು.
ಧಾರವಾಡದ ಸಿರಿಧಾನ್ಯ ಆಹಾರ ತಜ್ಞೆ ಡಾ. ಶಕುಂತಲಾ ಸವದತ್ತಿ ಮಾಸೂರು ಮತ್ತು ಸಾವಯವ ಕೃಷಿಕ ಭದ್ರಾವತಿಯ ಈಶ್ವರನ್ ತೀರ್ಥ ಸಿರಿಧಾನ್ಯ ಬಳಕೆಯ ಮಹತ್ವದ ಬಗ್ಯೆ ಮಾಹಿತಿ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್, ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಸೋನಿಯಾವರ್ಮ ಹಾಗೂ ನಿರ್ದೇಶಕರಾದ ಬೂದಪ್ಪ ಗೌಡ ಮತ್ತು ಮಮತಾ ರಾವ್ ಉಪಸ್ಥಿತರಿದ್ದರು.
ಸಿರಿ ಸಂಸ್ಥೆಯ ನಿರ್ದೇಶಕಿ ಮನೋರಮಾ ಭಟ್ ಸ್ವಾಗತಿಸಿದರು. ಯೋಜನಾಧಿಕಾರಿ ರೋಹಿತಾಕ್ಷ ಧನ್ಯವಾದವಿತ್ತರು. ರಾಮ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.