ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಡಿ.8ರಂದು ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ 347 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಮೂರೂವರೆ ವರ್ಷ ಅಭಿವೃದ್ಧಿ ಪರ, ಸ್ಥಿರವಾದ ಆಡಳಿತ ಕೊಡುವುದಕ್ಕೆ ಆದ್ಯತೆ ನೀಡಲಾಗುವುದು. 347 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕು, ಈ ಭಾಗದಲ್ಲಿ ಶಾಸಕರು ಏನೆಲ್ಲಾ ಆಪೇಕ್ಷೆ ಪಡುತ್ತಾರೋ ಮುಂದಿನ ಮೂರೂವರೆ ವರ್ಷದಲ್ಲಿ ಅದನ್ನೆಲ್ಲಾ ಪೂರ್ಣಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನವಾದರೂ ಗೆಲ್ಲಬೇಕೆನ್ನುವ ಸಂಕಲ್ಪ ಮಾಡಲಿದ್ದೇವೆ ಎಂದು ಬಿ.ಎಸ್.ವೈ. ಹೇಳಿದರು.
ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶದ 15 ಕ್ಷೇತ್ರಗಳಲ್ಲಿ ಕನಿಷ್ಠ 13 ವಿಧಾನಸಭಾ ಕ್ಷೇತ್ರಗಳನ್ನು ನಾವು ಗೆಲ್ಲಲಿದ್ದೇವೆ. ಕಾಂಗ್ರೆಸ್, ಜೆಡಿಎಸ್ ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಮುಖ್ಯಮಂತ್ರಿ ಹಾಗು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ,ಜಿ.ಪಂ ಸಿಇಒ ಡಾ. ಸೆಲ್ವಮಣಿ, ದ.ಕ. ಎಸ್ ಪಿ ಬಿ.ಎಂ ಲಕ್ಷ್ಮೀ ಪ್ರಸಾದ್, ಶಾಸಕರಾದ ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಭರತ್ ಶೆಟ್ಟಿ , ವೇದವ್ಯಾಸ ಕಾಮತ್ ಮಂಗಳೂರು, ಎಡಿಸಿ ರೂಪಾ, ಪುತ್ತೂರು ಎ.ಸಿ ಡಾ. ಯತೀಶ್ ಉಳ್ಳಾಲ್, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್, ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸ್ವಾಗತಿಸಿ, ಗೇರುಕಟ್ಟೆ ಸ.ಸಂ.ಪ.ಪೂ ಕಾಲೇಜು ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿ, ಅಪರ ಜಿಲ್ಲಾಧಿಕಾರಿ ಎಂ ಜೆ ರೂಪಾ ವಂದಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…