Advertisement
ಸುದ್ದಿಗಳು

ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿನಡಿಗೆ ಆರಂಭ

Share

ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆಯ ಅಂಗವಾಗಿ ಸುಳ್ಯದ ಗಾಂಧಿ ಚಿಂತನ ವೇದಿಕೆಯು ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ನಡೆಯುತ್ತಿರುವ ಗಾಂಧಿ ನಡಿಗೆ ಆರಂಭಗೊಂಡಿದೆ. ಮಹಾತ್ಮಾಗಾಂಧೀಜಿಯವರ ಆದರ್ಶ ಮತ್ತು ಚಿಂತನೆಗಳು ಎಲ್ಲೆಡೆ ಪಸರಿಸಬೇಕು ಎಂಬ ಉದ್ದೇಶದಿಂದ ಗಾಂಧಿನಡಿಗೆ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement

ಕಾರ್ಯಕ್ರಮಕ್ಕೆ ಮುನ್ನ ಗಾಂಧಿ ಚಿಂತನೆ ಕಾರ್ಯಕ್ರಮ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಗಾಂಧಿ ಚಿಂತನೆ ನಡೆಸಿಕೊಟ್ಟರು.

Advertisement

ಹಿರಿಯರಾದ ಕಿಲಂಗೋಡಿ ಶಂಕರ ರಾವ್, ಡಾ.ಗೋಪಿನಾಥ್, ಚಿದಾನಂದ ರಾವ್ ಪಾಟಾಜೆ, ಮಹಮ್ಮದ್ ಇಂಜಿನಿಯರ್, ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್, ಕುಂಞಪ್ಪ ಮಾಸ್ತರ್, ಐತ್ತ ಪಾಟಾಜೆ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಲಾ ನಾಗರಾಜ್ ಸ್ವಾಗತಿಸಿದರು. ಗಾಂಧಿ ಚಿಂತನಾ ವೇದಿಕೆ ಮುಖ್ಯ ಸಂಚಾಲಕ ಹರೀಶ್ ಬಂಟ್ವಾಳ್ ಪ್ರಸ್ತಾವನೆಗೈದರು. ಕೊರಗಪ್ಪ ಕುರುಂಬುಡೇಲು ವಂದಿಸಿದರು. ಗಾಂಧಿ ಚಿಂತನಾ ವೇದಿಕೆಯ ಡಾ.ಸುಂದರ್ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು.
ಬಿಳಿ ಜುಬ್ಬ ಮತ್ತು ಗಾಂಧಿ ಟೋಪಿ ಧರಿಸಿದ ನೂರ ಐವತ್ತು ಮಂದಿ ಗಾಂಧಿ ನಡಿಗೆಗೆಯಲ್ಲಿ ಭಾಗವಹಿಸುತ್ತಿದ್ದಾರೆ.

Advertisement

ಇವರೊಂದಿಗೆ ಸುಳ್ಯ ನೆಹರು ಸ್ಮಾರಕ ಕಾಲೇಜಿನ ಕಾಲೇಜಿನ ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಘಟಕ ಶ್ರೀ.ಧ,ಗ್ರಾ.ಯೋಜನೆಯ ಸದಸ್ಯರು, ಯುವಜನ ಸಂಯುಕ್ತ ಮಂಡಳಿ ಸದಸ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸುತ್ತಿದ್ದಾರೆ. ಗಾಂಧಿ ನಡಿಗೆಯಲ್ಲಿ ರಾಷ್ಟ್ರ ಧ್ವಜಗಳು ರಾರಾಜಿಸುತ್ತಿದ್ದು ಗಾಂಧಿ ಭಾವಚಿತ್ರಕ್ಕೆ ಅಲ್ಲಲ್ಲಿ ಪುಷ್ಪಾರ್ಜನೆಯು ನಡೆಯುತ್ತಿದೆ. ಗಾಂಧಿ ಚಿಂತನ ವೇದಿಕೆಯ ಮುಖ್ಯ ಸಂಚಾಲಕ ಹರೀಶ್ ಬಂಟ್ವಾಳ್, ಸಂಚಾಲಕರುಗಳಾದ ಡಾ.ಸುಂದರ ಕೇನಾಜೆ, ದಿನೇಶ್ ಮಡಪ್ಪಾಡಿ ನೇತೃತ್ವ ವಹಿಸಿದ್ದಾರೆ. ಅಲ್ಲಲ್ಲಿ ಸ್ವಾಗತ, ಕಿರು ಸಭಾ ಕಾರ್ಯಕ್ರಮ ನಡೆದು ಮಧ್ಯಾಹ್ನ 3 ಗಂಟೆಗೆ ನಡಿಗೆ ಸುಳ್ಯಕ್ಕೆ ಆಗಮಿಸಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

2 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

23 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

23 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

23 hours ago