ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ಕುರುಂಬುಡೇಲು ದ್ವಜಾರೋಹಣಗೈದರು.
ಪರ ರಾಜ್ಯದ ಕನ್ನಡಾಭಿಮಾನಿಗಳಿಗೆ ಸಮ್ಮಾನ: ಪರ ರಾಜ್ಯದಿಂದ ಬಂದು ಇಲ್ಲಿ ನೆಲೆಸಿ ಕನ್ನಡ ಕಲಿತು ಕನ್ನಡ ಭಾಷೆಯಲ್ಲಿ ವ್ಯವಹಸರಿಸುತ್ತಿರುವ ರಾಜಸ್ಥಾನದ ಅನಿಲ್ ಬರ್ಫಾ, ಶಾಂತಿದೇವಿ, ನರಸಿಂಗ್ ಪಟೇಲ್ ಹಾಗೂ ಕೇರಳದ ವಿನೋದ್ ಇವರುಗಳನ್ನು ಸಮ್ಮಾನಿಸಲಾಯಿತು. ಬೆಳ್ಳಾರೆ ಪರಿಸರದ ಪೂರ್ವ ಪ್ರಾಥಮಿಕ ,ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಸ್ನೇಹಿತರಕಲಾ ಸಂಘದ ನಿಕಟಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕೊರಗೊಪ್ಪ ಕುರುಂಬುಡೇಲು ಸ್ವಾಗತಿಸಿದರು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು. ಜ್ಞಾನದೀಪ ಸಂಸ್ಥೆಯ ಕನ್ನಡ ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…