ಬೆಳ್ಳಾರೆ: ಮನುಕುಲದ ಸೇವೆಯೊಂದಿಗೆ ಯುವ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಜೇಸಿಐ ಯುವ ಸಮುದಾಯದ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಜೇಸಿಐ ವಲಯ 15ರ ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಹೇಳಿದರು.
ಅವರು ದರ್ಖಾಸ್ತು ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಬೆಳ್ಳಾರೆ ಜೇಸಿಐನ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಜೇಸಿಯಿಂದ ವ್ಯಕ್ತಿತ್ವ ವಿಕಸನ: ಜೇಸಿಐ ವಲಯ 15ರ ಪೂರ್ವಾಧ್ಯಕ್ಷ ಅಶೋಕ ಚೂಂತಾರು ಮಾತನಾಡಿ, ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಜೇಸಿ ಪ್ರೇರಕವಾಗಿದೆ. ವ್ಯಕ್ತಿತ್ವ ವಿಕಸನದ ಮೂಲಕ ಯುವ ಜನತೆಯನ್ನು ಬದಲಾಯಿಸಬಲ್ಲ ಶಕ್ತಿಯನ್ನು ಜೇಸಿ ಸಂಸ್ಥೆ ಹೊಂದಿದೆ ಎಂದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ನೂತನ ಅಧ್ಯಕ್ಷ ವೀರನಾಥ್ ಕಲ್ಲೋಣಿ ಅವರಿಗೆ ಹಾಗು ಯುವ ಜೇಸಿ ಅಧ್ಯಕ್ಷ ಸಾಗರ್ ಬೆಳ್ಳಾರೆ ನೂತನ ಅಧ್ಯಕ್ಷ ಹರೀಶ್ ಯು ಕೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು.
ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ, ಬೆಳ್ಳಾರೆ ಜೇಸಿಐನ ನಿಕಟ ಪುರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಕಾರ್ಯದರ್ಶಿ ಪ್ರವೀಣ್ ಬೆಳ್ಳಾರೆ ಉಪಸ್ಥಿತರಿದ್ದರು. ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿದರು. ಕಾರ್ಯದರ್ಶಿ ರವೀಂದ್ರನಾಥ ಅಜಪಿಲ ವಂದಿಸಿದರು. ಬಳಿಕ ಸುಳ್ಯದ ಫ್ಯೂಶನ್ ಇನ್ಸ್ಟಿಟ್ಯೂಟ್ ಆಫ್ ಡ್ಯಾನ್ಸ್ ಮಕ್ಕಳಿಂದ ಡ್ಯಾನ್ಸ್ ಧಮಾಕ ನಡೆಯಿತು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…