Advertisement

ಬೆಳ್ಳಾರೆ ಜ್ಞಾನದೀಪದಲ್ಲಿ ‘ಪರೀಕ್ಷೆ ಎದುರಿಸುವುದು ಹೇಗೆ?’ ತರಬೇತಿ ಕಾರ್ಯಕ್ರಮ

Share

ಬೆಳ್ಳಾರೆ: ಅಂಕ ಗಳಿಕೆಯನ್ನು ಮಾತ್ರ ಯೋಚಿಸದೇ ಭವಿಷ್ಯದ ಬಗ್ಗೆಯೂ ವಿದ್ಯಾರ್ಥಿಗಳು ಯೋಚಿಸಿಕೊಂಡು ಓದಿನಲ್ಲಿ ತೊಡಗಿದಾಗ ಯಶಸ್ಸು ಗಳಿಸಲು ಸಾಧ್ಯ. ಉನ್ನತ ಶೈಕ್ಷಣಿಕ ಭವಿಷ್ಯ ರೂಪಿಸಿಕೋಳ್ಳುವುದಕ್ಕೆ ಪರೀಕ್ಷೆಯನ್ನು ಉತ್ತಮ ರೀತಿಯಲ್ಲಿ ಎದುರಿಸುವುದು ಅನಿವಾರ್ಯ. ಇಚ್ಛಾಶಕ್ತಿ ಮತ್ತು ಶ್ರದ್ಧೆಯಿಂದ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು ಎಂದು ಶ್ರೀ ರಾಮಕುಂಕೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ ಬಿಳಿನೆಲೆ ಹೇಳಿದರು.

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮತ್ತು ಇಂಟರ್ಯಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ನಡೆದ ಪರೀಕ್ಷೆ ಎದುರಿಸುವುದು ಹೇಗೆ? ಎಂಬ ವಿಷಯದ ತರಬೇತು ಕಾರ್ಯಕ್ರಮದಲ್ಲಿ ಅವರು ತರಬೇತಿ ನೀಡಿದರು.

ಅಧ್ಯಯನ ತಂತ್ರಗಳನ್ನು ಬಳಸಿ ಸುಲಭವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವ ಹಾಗೂ ಉತ್ತಮ ಅಂಕ ಗಳಿಸುವ ವಿಧಾನಗಳನ್ನು ಸತೀಶ್ ಭಟ್ ಬಿಳಿನೆಲೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ನವೀನ್ ಕುಮಾರ್ ರೈ ತಂಬಿನಮಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಟ್ರಸ್ಟಿ ದಿನಕರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷೆ ಯಶ್ಮಿತಾ ಉಪಸ್ಥಿತರಿದ್ದರು. ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‍ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಪಿನ್‍ಚಂದ್ರ ಸ್ವಾಗತಿಸಿದರು. ಶ್ರೀ ಸರಸ್ವತಿ ಸೌಹಾರ್ದ ಸಹಕಾರಿಯ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕ ಶಿವಪ್ರಸಾದ್ ಪೆರುವಾಜೆ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

22 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago