Advertisement
ಸುದ್ದಿಗಳು

ಬೆಳ್ಳಾರೆ ಪಂಚಾಯತ್ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Share

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ 2019-20ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಸಾಮಾಜಿಕ ಪರಿಶೋಧನಾ ತಾಲೂಕು ಸಂಯೋಜನಾಧಿಕಾರಿ ರೋಹಿತ್ ಪ್ರಸ್ತಾವಿಸಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಿ ಪಿಂಚಣಿ ಖಾತೆದಾರರ ವರದಿಯನ್ನು ವಾಚಿಸಿದರು.. ತಾಂತ್ರಿಕ ಅಭ್ಯಂತಕ ಆತಿಷ್ ಮಾತನಾಡಿ ಕೃಷಿ ಹೊಂಡ ನಿರ್ಮಾಣಕ್ಕೆ, ಹಾಗು ಸಾರ್ವಜನಿಕ ಕಾಮಗಾರಿಗಳಿಗೆ ಅನುದಾನಗಳ ಮಾಹಿತಿ ನೀಡಿದರು. ಅದರೊಂದಿಗೆ ಪ್ರತಿಯೊಬ್ಬನ ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು 12 ಸಾವಿರ ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತಿದ್ದು, ಅಗತ್ಯವಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದರು.

ತೋಟಗಾರಿಕಾ ಇಲಾಖೆಯ ಮಾಹಿತಿ ನೀಡಿದ ಬೆಳ್ಳಾರೆ ಗ್ರಾಮ ಪಂಚಾಯತ್‍ನ ಕಾರ್ಯದರ್ಶಿ ಭವ್ಯ ಅಡಿಕೆ ಕೃಷಿಗೆ ಉತ್ತೇಜನ ನೀಡಲಾಗುತ್ತಿದ್ದು, ಪ್ರತಿ ಅಡಿಕೆ ಗುಂಡಿಗೆ 110ರೂ(2.30ಫೀಟು ಅಗಲ ಮತ್ತು ಉದ್ದವಿದ್ದರೆ ಮಾತ್ರ) ನೀಡಲಾಗುತ್ತಿದೆ. ಅಂತೆಯೆ ತೆಂಗಿನ ಗುಂಡಿಯೊಂದಕ್ಕೆ 300 ರೂಪಾಯಿಗಳಂತೆ ಸಹಾಯಧನವನ್ನು ವಿತರಿಸಲಾಗುತ್ತಿದೆ. ಅಗತ್ಯವಿದ್ದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಬಾವಿ ನಿರ್ಮಾಣವಾಗುತ್ತಿದ್ದು, ಮಕ್ಕಳು, ಹೊಂಡದ ಅರಿವಿಲ್ಲದವರು ಬಾವಿಯೊಳಗೆ ಬೀಳುವ ಅಪಾಯವಿದ್ದು, ಬಾವಿ ನಿರ್ಮಾಣವಾಗುತ್ತಿರುವ ಜಾಗ ಸುರಕ್ಷಿತವಾಗಿಲ್ಲವೆಂದು ಸಮಾಜಿಕ ಪರಿಶೋಧನಾ ಸಂಯೋಜನಾಧಿಕಾರಿ ರೋಹಿತ್ ಅವರು ಬೆಳ್ಳಾರೆ ಗ್ರಾಮ ಪಂಚಾಯಿತಿಯನ್ನು ಎಚ್ಚರಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ ನೋಡೆಲ್ ಅಧಿಕಾರಿ ಹಾಗು ಶಿಕ್ಷಣ ಸಂಯೋಜನಾಧಿಕಾರಿ ವಸಂತಕುಮಾರ್ ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಉದ್ಯೋಗ ಖಾತರಿ ಯೋಜನೆಯಡಿ ಜನರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ಜನರು ನಿರಾಶರಾಗಬಾರದು. ಸಭೆಗೆ ಪ್ರತಿಯೊಬ್ಬ ಫಲಾನುಭವಿಗಳು ಬಂದರೆ ಸಂಬಂಧಿಸಿದ ವಿಷಯಗಳ ಕುರಿತು ನೇರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದರು

ವೇದಿಕೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯರಾದ ಆರಿಫ್ ಬೆಳ್ಳಾರೆ, ನವೀನ್ ರೈ ತಂಬಿನಮಕ್ಕಿ, ವಿಠಲ್‍ದಾಸ್, ಪೂರ್ಣಿಮಾ ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ಕಾರ್ಯದರ್ಶಿ ಭವ್ಯ ಅನುಪಾಲನಾ ವಿವರವನ್ನು ವಾಚಿಸಿ ವಂದಿಸಿದರು. ಜಯರಾಮ್ ವಾರ್ಷಿಕ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ನಾಡಗೀತೆ ಹಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

4 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

4 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

4 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

7 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago