ಸುಳ್ಯ:ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸುಮಾರು 2 ವರ್ಷಗಳಿಂದ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಯ್ಯ ಡಿ.ಎನ್.ರವರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಅವರಿಗೆ ಬೆಳ್ಳಾರೆ ಠಾಣೆಯ ವತಿಯಿಂದ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮವು ಪೆರುವಾಜೆಯ ಜೆ.ಡಿ.ಅಡಿಟೋರಿಯಂನಲ್ಲಿ ನಡೆಯಿತು.
ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಸತೀಶ್ ಕುಮಾರ್ ಈರಯ್ಯ ಡಿ.ಎನ್-ಚಂಪಲತಾ ದಂಪತಿಗಳನ್ನು ಶಾಲುಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈರಯ್ಯ ಅವರನ್ನು ಬೆಳ್ಳಾರೆ ಠಾಣೆಯ ಹೋಂಗಾರ್ಡಗಳ ವತಿಯಿಂದ ಮತ್ತು ಪಿಗ್ಮಿ ಸಂಗ್ರಾಹಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಈರಯ್ಯರವರು ಸುಮಾರು 2 ವರ್ಷಗಳ ಕಾಲ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸೇವೆ ದಿನಗಳನ್ನು ಸ್ಮರಿಸಿ ಸಹಕರಿಸಿದ ಹಿರಿಯ ಅಧಿಕಾರಿಗಳಿಗೆ, ಸಹೋದ್ಯೋಗಿ ಮಿತ್ರರಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
ವೇದಿಕೆಯಲ್ಲಿ ಸುಳ್ಯ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಂ.ಆರ್.ಹರೀಶ್, ಸುಬ್ರಹ್ಮಣ್ಯ ಠಾಣೆಯ ಎ.ಎಸ್.ಐ.ಚಂದಪ್ಪ, ಸುಳ್ಯ ನ್ಯಾಯಾಲಯದ ಎ.ಪಿ.ಪಿ.ಸಂತೋಷ್,ಬೆಳ್ಳಾರೆ ಠಾಣೆಯ ಎ.ಎಸ್.ಐ.ಮಧುಕುಮಾರ್, ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾತನಾಡಿದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಮಹಾದೇವ್ ಪ್ರಸಾದ್ ಪ್ರಾಸ್ತಾವಿಕ ಮಾತನಾಡಿದರು. ಎ.ಎಸ್.ಐ.ಭಾಸ್ಕರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಮಹಾದೇವ ಪ್ರಸಾದ್ ವಂದಿಸಿದರು. ಬೆಳ್ಳಾರೆ ಠಾಣೆಯ ಸಿಬ್ಬಂದಿ ವರ್ಗದವರು ಸಹಕರಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…