ಬೆಳ್ಳಾರೆ: ಮುಂಬರುತ್ತಿರುವ ಈದ್ ಮಿಲಾದ್, ಟಿಪ್ಪು ಜಯಂತಿ ಮತ್ತು ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸೌಹಾರ್ದತೆಯ ವಿಶೇಷ ಸಭೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಈರಯ್ಯ.ಡಿ.ಎನ್ ಅವರು ಮಾಹಿತಿ ನೀಡುತ್ತಾ ಹಬ್ಬದ ದಿನದಂದು ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಬಾರದು. ಈದ್ ಮಿಲಾದ್ ಜಾಥದಲ್ಲಿ ಅನುಮತಿ ಪಡೆದು ಕಾಲ್ನಡಿಗೆ ಜಾಥಾ ನಡೆಸಬಹುದು. ವಾಹನದ ಜಾಥಕ್ಕೆ ಅವಕಾಶವಿರುವುದಿಲ್ಲ ಎಂದರು. ಬಳಿಕ ಸಾರ್ವಜನಿಕ ಹಿತಾಸಕ್ತಿ ಹಾಗು ಸಮಾಜದಲ್ಲಿ ಶಾಂತಿ ಹಾಗು ಸುವ್ಯವಸ್ಥೆ ಕುರಿತು ಮಾತನಾಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಟಿಪ್ಪು ಜಯಂತಿಯನ್ನು ಸರ್ಕಾರ ನಿಷೇಧಿಸಿರುವುದರಿಂದ ಸಾರ್ವಜನಿಕವಾಗಿ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಯೋಧ್ಯೆ ತೀರ್ಪು ಬಂದಾಗ ಯಾರ ಪರವಾಗಿದ್ದರೂ ಅದನ್ನು ಸಮಾನವಾಗಿ ಸ್ವೀಕರಿಸಬೇಕು. ಪರವಾಗಿ ತೀರ್ಪು ಬಂದಾಗ ಸಾರ್ವಜನಿಕವಾಗಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದು, ವಾಹನ ಜಾಥಾ ನಡೆಸುವುದು ಮಾಡಕೂಡದು. ಅಂಥಹ ತೊಂದರೆಗಳಾದಾಗ ತಕ್ಷಣವೇ ಠಾಣೆಗೆ ಮಾಹಿತಿ ನೀಡಿ ಎಂದು ಹೇಳಿದರು.
ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಸಬ್‍ಇನ್‍ಸ್ಪೆಕ್ಟರ್ ಅವರು ಅಯೋಧ್ಯೆ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೆಸ್‍ಬುಕ್‍ಗಳಲ್ಲಿ ಪೋಸ್ಟ್ ಗಳನ್ನು ರವಾನಿಸುವುದಾಗಲಿ ಅಥವಾ ಫಾರ್ವಡ್ ಮಾಡುವುದಾಗಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಎಲ್ಲಾ ದೇವಸ್ಥಾನಗಳ, ಚರ್ಚ್‍ಗಳ ಹಾಗೂ ಮಸೀದಿಗಳ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಠಾಣೆಯ ಸಿಬ್ಬಂದಿಗಳು ಸಹಕರಿಸಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…