ಬೆಳ್ಳಾರೆ: ಬೆಳ್ಳಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಗರಾಭಿವೃದ್ದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಭೇಟಿ ನೀಡಿದರು.
ನೆರೆದಿದ್ದ ಸಾರ್ವಜನಿಕರಿಂದ ಆಸ್ಪತ್ರೆಯ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿದರು. ಮುಖಂಡ ಪ್ರೇಮಚಂದ್ರ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಿತಿ ಮತ್ತು ಸೌಲಭ್ಯಗಳ ಕೊರತೆಗಳ ಕುರಿತು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್ ಮನ್ಮಥ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಕಾಮತ್, ಅನಿಲ್ ರೈ ಚಾವಡಿಬಾಗಿಲು, ಹಿರಿಯ ಮುಖಂಡ ಮಾಧವ ಗೌಡ ಕಾಮಧೇನು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ಶಕುಂತಳಾ ನಾಗರಾಜ್, ಉಪಾಧ್ಯಕ್ಷ ಮುಸ್ತಾಫಾ ಬೆಳ್ಳಾರೆ, ಸದಸ್ಯ ಆರಿಫ್ ಬೆಳ್ಳಾರೆ, ವರ್ತಕರ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು, ಕುಕ್ಕೇ ಸುಬ್ರಹ್ಮಣ್ಯ ದೇವಾಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಾಜೀವಿ ಆರ್.ರೈ, ಸಚಿನ್‍ರಾಜ್ ಶೆಟ್ಟಿ ಪೆರುವಾಜೆ, ಕುಶಾಲಪ್ಪ ಪೆರುವಾಜೆ, ಅನ್ಸಾರ್ ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಶ್ವಥಿ ಮರಿಯಾ ಡಿಸೋಜಾ ಉಪಸ್ಥಿತರಿದ್ದರು.