ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅತಿಥಿಗಳು, ಮೆಸ್ಕಾಂ ಅಧಿಕಾರಿಗಳು ಉದ್ಘಾಟಿಸಿದರು. ಶೋಭಾ ಕೆ ಪಂಜಿಗಾರು ಅಧ್ಯಕ್ಷ ತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ ನರಸಿಂಹ ಜೋಶಿ, ಮೆಸ್ಕಾಂ ಬೆಳ್ಳಾರೆ ಶಾಖೆಯ ಕಿರಿಯ ಇಂಜಿನಿಯರ್ ಕೆ ವಿ ಪ್ರಸಾದ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಆರ್ ಸಿ ಸಿ ಚೇರ್ಮನ್ ಎನ್ ಎಸ್ ವೆಂಕಪ್ಪ, ಪಂಜ ಮೆಸ್ಕಾಂ ಶಾಖೆಯ ಅಧಿಕಾರಿ ಹರಿಕೃಷ್ಣ, ಕ್ಲಬ್ ನ ಕಾರ್ಯದರ್ಶಿ ಹೇಮಾ ಮಂಡೇಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಆರ್ಯನ್ ಹೆಗ್ಡೆ ಸರ್ವೆ ಪುತ್ತೂರು ಇವರಿಗೆ ಸಮ್ಮಾನಿಸಲಾಯಿತು. ಅಲ್ಲದೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಗುರುತಿಸಿ ಅಭಿನಂದಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಡ್ರೀಮ್ ಕ್ಯಾಚರ್ಸ್ ಡ್ರಾಮ ತಂಡದಿಂದ ಕಿರು ನಾಟಕ ಹಾಗೂ ರೋಟರಿ ಸಮುದಾಯ ದಳ ತಂಡದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .
ಅಸೌಖ್ಯಕ್ಕೆ ಒಳಗಾದ ಬಡತನ ಕುಟುಂಬಕ್ಕೆ ಸಂಸ್ಥೆಯ ವತಿಯಿಂದ ಸಹಾಯಾರ್ಥವಾಗಿ ಆರ್ಥಿಕ ಸಹಾಯ ಮಾಡಲಾಯಿತು. ಶೋಭಾ ಕೆ ಸ್ವಾಗತಸಿ, ಮೋಹಿನಿ ವಂದಿಸಿದರು. ವಸಂತ್ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…