ಬೆಳ್ಳಾರೆ: ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಪದವಿ ಕೇಂದ್ರ ಬೆಳ್ಳಾರೆಯಲ್ಲಿ ಭಾರತೀಯ ಅಂಚೆ ಇಲಾಖೆ, ಸುಳ್ಯ ಉಪವಿಭಾಗ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಿಯ ಪೋಸ್ಟ್ ಪೆಮೆಂಟ್ ಬ್ಯಾಂಕ್ ಖಾತೆ ತೆರೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 77 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪುತ್ತೂರು ಹಿರಿಯ ಅಂಚೆ ಅಧೀಕ್ಷಕ ಜಗದೀಶ್ ಪೈ, ಸುಳ್ಯ ಉಪವಿಭಾಗದ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ ಬಿ, ಅಂಚೆ ಮೇಲ್ವಿಚಾರಕ ಆನಂದ ಗೌಡ, ಐಪಿಪಿಬಿಯ ಬೇಬಿ, ಅಂಚೆ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕರು ಇದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಮೂಲಕವೇ ಪಾವತಿಸಲು ಕಾಲೇಜು ನಿರ್ದೇಶನಾಲಯ ಇತ್ತೀಚಿಗೆ ನಿರ್ದೇಶನ ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel