ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.
Advertisement
ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement